‘ಬಿಜೆಪಿ ಮುಕ್ತ ಭಾರತ’ ಕರ್ನಾಟಕದಿಂದಲೇ ಆರಂಭ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.28. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ‘ಕಾಂಗ್ರೆಸ್ ಮುಕ್ತ ಭಾರತ’ ಘೋಷಣೆಯಡಿ ಕಾಂಗ್ರೆಸ್ ಪಕ್ಷವನ್ನು ದೇಶದಿಂದ ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿರುವ ಬೆನ್ನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ದೇಶದಲ್ಲಿ ‘ಬಿಜೆಪಿ ಮುಕ್ತ ಭಾರತ’ ನಿರ್ಮಾಣ ಆಗಲಿದ್ದು, ಆ ಕಾರ್ಯವು ಕರ್ನಾಟಕದಿಂದಲೇ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ. ಇದಕ್ಕಾಗಿ ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಅವರು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ನಾವು ಅಧಿಕಾರಕ್ಕೇರುತ್ತೇವೆ. ಬಿಜೆಪಿ ಮುಕ್ತ ಭಾರತಕ್ಕೆ ಕರ್ನಾಟಕದಿಂದಲೇ ಅಡಿಪಾಯ ಹಾಕಲಿದ್ದೇವೆ ಎಂದಿದ್ದಾರೆ. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿಯ ಅಗತ್ಯವಿಲ್ಲ. ಪ್ರಾಮಾಣಿಕ ಹಾಗೂ ಅಭಿವೃದ್ಧಿಪರ ಆಡಳಿತ ನೀಡುವ ಪಕ್ಷವನ್ನು ಕರ್ನಾಟಕದ ಜನ ಬೆಂಬಲಿಸುತ್ತಾರೆ. ಹೀಗಾಗಿ ಸ್ವಂತ ಶಕ್ತಿಯಿಂದ ನಾವು ಗೆದ್ದು ಬರುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top