ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.31. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪೊಲೀಸ್ ಫೈರ್ ಸರ್ವಿಸಸ್ ವಿಭಾಗದ ಐಜಿಪಿಯಾಗಿ ಭಡ್ತಿಗೊಳಿಸಿ ವರ್ಗಾಯಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ. ಲಕ್ಷ್ಮಿಪ್ರಸಾದ್ ರವರನ್ನು ನೇಮಿಸಲಾಗಿದೆ.

 

ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿಪ್ರಸಾದ್ ರವರನ್ನು ಜನವರಿ 1ರಿಂದ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿ ಹಾಗೂ ಆಡಳಿತಾತ್ಮಕ ಸುಧಾರಣೆ ಇಲಾಖೆಯ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ.

Also Read  ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌

error: Content is protected !!
Scroll to Top