ಸಾವಯವ ಕೃಷಿ ಮತ್ತು ದೃಢೀಕರಣ  ಯೋಜನೆ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1. ಸಾವಯವ ಕೃಷಿ ಪ್ರಮಾಣೀಕೃತ ಪ್ರದೇಶವನ್ನು ಹೆಚ್ಚಿಸುವುದೊಂದಿಗೆ ಮಾರುಕಟ್ಟೆಗೆ ನಿರಂತರವಾಗಿ ಒಳ್ಳೆಯ ಗುಣಮಟ್ಟದ ಸಾವಯವ ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡಲು ‘ಸಾವಯವ ಕೃಷಿ ಮತ್ತು ದೃಢೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯ ಸಾವಯವ ಪ್ರಮಾಣೀಕರಣ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ.

ಈ ಯೋಜನೆಯ ಸೌಲಭ್ಯ ಪಡೆಯಲು ಕ್ಷೇತ್ರವನ್ನು ಸಾವಯವ ಪ್ರಮಾಣೀಕರಣಕ್ಕೆ ಈಗಾಗಲೇ ಮೊದಲನೇ ವರ್ಷಕ್ಕೆ ನೊಂದಾಯಿಸಲಾಗಿರುವ ಮತ್ತು ನೊಂದಾಯಿಸಲು ಆಸಕ್ತಿ ಇರುವ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು, ಕೃಷಿಕರ ಸಂಘಗಳು, ಖಾಸಗಿ ಸಂಸ್ಥೆಗಳು,ರೈತ ಉತ್ಪಾದನಾ ಸಂಸ್ಥೆಗಳು,ಕೃಷಿಕರು, ಡಿಸೆಂಬರ್ 31 ರೊಳಗಾಗಿ ಸಮೀಪದ ಇಲಾಖೆಯ ಕಛೇರಿಗಳಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲು ಈ ಹಿಂದೆ ಪ್ರಕಟನೆ ನೀಡಲಾಗಿತ್ತು. ಸದರಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನವರಿ 10, 2019ರ ತನಕ ಮುಂದೂಡಲಾಗಿದ್ದು, ಆಸಕ್ತಿಯುಳ್ಳ ಕೃಷಿಕರು ಹಾಗೂ ಸಂಘ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಮಂಗಳೂರು. ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Also Read  ಪುತ್ತೂರು: ಕೊಲೆಗೆ ಸಂಚು; ಇಬ್ಬರ ಬಂಧನ

error: Content is protected !!
Scroll to Top