ಮಂಗಳೂರು: ಹೊಸ ವರ್ಷದಲ್ಲಿ ಮೊದಲ‌ ಬಲಿ ► ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ನಗರದ ಹೊರವಲಯದ ಪಂಜಿಮೊಗರು ಸಮೀಪ ಗುರುವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಕಾವೂರು ಸಮೀಪದ ಉರುಂದಾಡಿ ನಿವಾಸಿ ಯೋಗೀಶ್ ಎಂಬವರ ಪುತ್ರ ರಾಕೇಶ್(27) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ರಾಕೇಶ್ ಗುರುವಾರ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಂಜಿಮೊಗರು ಸಮೀಪದ ಮಾಲಾಡಿ ರೋಡ್ ಎಂಬಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಮಾರಕಾಯುಧಗಳಿಂದ ಇರಿದು ಪರಾರಿಯಾಗಿದೆ‌. ಗಂಭೀರ ಗಾಯಗೊಂಡಿದ್ದ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Also Read  ಸುಳ್ಯ: ತಂಡದಿಂದ ಯುವಕನ ಮೇಲೆ ಹಲ್ಲೆ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top