ಕಡಬ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತು ಬುಲ್ ಬುಲ್ಸ್ ವಾರ್ಷಿಕ ಮೇಳ 2019

(ನ್ಯೂಸ್ ಕಡಬ)newskadaba.com.ಕಡಬ,ಜ.6. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ ಮತ್ತು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ಬುಲ್  ವಾರ್ಷಿಕ ಮೇಳ 2019 ಉದ್ಘಾಟನಾ ಸಮಾರಂಭ ಜ.4ರಂದು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮಕ್ಕೆಶುಭಹಾರೈಸಿದರು.ಉಪ್ಪಿನಂಗಡಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ಅಬ್ರಾಹಂ ವರ್ಗೀಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು.

 

ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಂಗಳೂರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಆಯುಕ್ತರಾದ ರಾಮಶೇಷ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಕಜೆ, ಕಡಬ ರೋಟರಿ ಕ್ಲಬ್ ಅಧ್ಯಕ್ಷ ಹರೀಶ್ ಶೆಟ್ಟಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಕಡಬ ಗ್ರಾ.ಪಂ.ಸದಸ್ಯ ಸಿಜೆ ಸೈಮನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕ ರೆ| ಫಾ| ರೊನಾಲ್ಡ್ ಲೋಬೋ, ಶಿಬಿರದ ನಾಯಕಿ ಗ್ರೇಸಿ ಪಿಂಟೊ, ಉಪ್ಪಿನಂಗಡಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ವಂದನಾ, ಪುತ್ತೂರು ಭಾರತ್ ಸೇವಾದಳ ಸಮನ್ವಯಾಧಿಕಾರಿ ಸುಂದರ ಗೌಡ ಸಹಕರಿಸಿದರು.

Also Read  ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

error: Content is protected !!
Scroll to Top