ಸಿದ್ದರಾಮಯ್ಯರದ್ದು ವಚನ ಭ್ರಷ್ಟ ಸರಕಾರ: ಹೆಚ್. ವಿಶ್ವನಾಥ್ ಲೇವಡಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು.28. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಧಣಿಗಳನ್ನು ಜೈಲಿಗಟ್ಟುತ್ತೇನೆ ಎಂದು ಹೇಳಿ 330 ಕಿ.ಮೀ. ಪಾದಯಾತ್ರೆ ನಡೆಸಿ, ರಾಜ್ಯದ ಬೊಕ್ಕಸ ತುಂಬುತ್ತೇನೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ವಚನ ಭ್ರಷ್ಟ ಸರಕಾರ ಎಂದು ಮಾಜಿ ಸಂಸದ, ಜೆಡಿಎಸ್ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

ಅವರು ಶುಕ್ರವಾರದಂದು ಮಡಿಕೇರಿಯಲ್ಲಿ ನಡೆದ ಜೆಡಿಎಸ್ ಪಕ್ಷಕ್ಕೆ ಮುಖಂಡರ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದರು. ಭ್ರಷ್ಟಾಚಾರ ರಹಿತ ಹಾಗೂ ಎಲ್ಲರಿಗೂ ಸಮಾನ ನ್ಯಾಯ ಒದಗಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರವನ್ನು ಕೈಯೊಳಗಿಟ್ಟಿದೆ. ಕರುನಾಡಿನ ಪ್ರಮುಖ ನದಿಗಳ ರಕ್ಷಣೆಯಾಗುತ್ತಿಲ್ಲ ಎಂದು ದೂರಿದರು. ಕರ್ನಾಟಕದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳ ಅಗತ್ಯತೆಯಿದ್ದು,  ತನ್ನ ಝಂಡಾ ಮಾತ್ರ ಬದಲಾಗಿದೆ ಹೊರತು ಅಜೆಂಡಾ ಬದಲಾಗಿಲ್ಲ ಎಂದರು. ರಾಜಕಾರಣ ನಿಂತ ನೀರಲ್ಲ. ಸುದೀರ್ಘ 40 ವರ್ಷಗಳ ಯಾತ್ರೆ ಮಾಡಿದ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿರುವ ನಿಟ್ಟಿನಲ್ಲಿ ಮಡಿಕೇರಿ ಕ್ಷೇತ್ರದಿಂದ ಜೀವಿಜಯ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

error: Content is protected !!
Scroll to Top