ಕೋಡಿಂಬಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ► ಬೈಹುಲ್ಲು ಸಾಗಾಟದ ಪಿಕಪ್ ವಾಹನ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.09. ಬೈಹುಲ್ಲು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಸುಟ್ಟು ಕರಕಲಾದ ಘಟನೆ ಬುಧವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಕೋಡಿಂಬಾಡಿಯ ಮನೆಯೊಂದಕ್ಕೆ ಶಾಂತಿನಗರ ರಸ್ತೆಯ ಮೂಲಕ ಪಿಕ್ಅಪ್ ವಾಹನದಲ್ಲಿ‌ ಬೈ ಹುಲ್ಲು ಸಾಗಾಟ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಕಿನ್ನೆತ್ತಿಪಳಿಕೆ ಎಂಬಲ್ಲಿ ವಿದ್ಯುತ್ ಕಂಬದ ತಂತಿ ಪಿಕ್ಅಪ್ ವಾಹನಕ್ಕೆ ತಾಗಿದ್ದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಪಿಕಪ್ ವಾಹನದ ಒಳಗಿದ್ದವರು ಇಳಿದು ಹೊರ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಪುತ್ತೂರು ಅಗ್ನಿಶಾಮಕದಳದವರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

Also Read  ಕಡಬ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

error: Content is protected !!
Scroll to Top