ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.

 

 2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್‍ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು  (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ, ಡಾ| ಅಂಬೇಡ್ಕರ್ ವೀಧಿ, ಬೆಂಗಳೂರು-560 001 ಇಲ್ಲಿಗೆ ಜನವರಿ 31 ರಂದು ಸಂಜೆ 5.30 ರೊಳಗೆ ಸಲ್ಲಿಸಬೇಕುಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು – 575003, ದೂರವಾಣಿ (0824) 2425873 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು(ಪ್ರಭಾರ), ನಗರ ಕೇಂದ್ರ ಗ್ರಂಥಾಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

error: Content is protected !!
Scroll to Top