(ನ್ಯೂಸ್ ಕಡಬ) newskadaba.com.ಕಡಬ,ಜ.12. ಕಡಬ ಗ್ರಾ.ಪಂ.ನ 2018-19ನೇ ಸಾಲಿನ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಜ.7ರಂದು ಕಡಬ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭಾ ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ತಾಲೂಕು ಯುವಜನ ಸಬಳೀಕರಣ ಮತ್ತು ಕ್ರೀಡಾಧಿಕಾರಿ ಮಾಮಚ್ಚನ್ ರವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ. ಕೋಲ್ಪೆ, ತಾಲೂಕು ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ನವೀನ್ ಭಂಡಾರಿ, ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಎ.ಎಸ್.ಶೆರೀಪ್, ಯಶೋಧಾ, ಇಂದಿರಾ, ರೇವತಿ, ತಾಂತ್ರಿಕ ಅಭಿಯಂತರರಾದ ಮನೋಜ್, ಸಂಪನ್ಮೂಲ ವ್ಯಕ್ತಿಗಳಾದ ಭಾಸ್ಕರ, ಜಾನಕಿ, ಸುಪ್ರಿಯಾ, ಚಂಚಲ ಕುಮಾರಿ ಸಾಮಾಜಿಕ ಪ್ರಗತಿ ಪರಿಶೋದನೆ ನಡೆಸಿದರು.
ಎನ್.ಆರ್.ಇ.ಜಿ. ತಾಲೂಕು ಸಂಯೋಜಕರಾದ ಚಂದ್ರಶೇಖರ್ ಮಾತನಾಡಿ ಕಡಬ ಗ್ರಾ.ಪಂ.ನಲ್ಲಿ ಕಡತ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫಲಾನುಭವಿಗಳು ಎನ್.ಆರ್.ಇ.ಜಿ.ಯಲ್ಲಿ ತೊಡಗಿಸಿಕೊಂಡು ಅಭಿವೃದ್ಧಿ ಹೊಂದುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಸಹಕರಿಸಬೇಕೆಂದರು.ಗ್ರಾ. ಪಂ.ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಉದ್ಯೋಗ ಖಾತರಿ ಯೋಜನೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯದರ್ಶಿ ಸಂತೋಷ್ ಸ್ವಾಗತಿಸಿ, ಸಿಬ್ಬಂದಿ ಗುರುರಾಜ್ ಭಟ್ ವಂದಿಸಿದರು.