ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಕಡಬ ಜ್ಯೂನಿಯರ್ ಕಾಲೇಜಿನ ಹೊಸ ಕಟ್ಟಡಕ್ಕೆ 1 ಕೋಟಿ ಅನುದಾನ ಮಂಜೂರುಗೊಂಡು ಟೆಂಡರ್ ಮುಗಿದು ಕಾಮಗಾರಿ ಆರಂಭಗೊಳ್ಳದೇ ಇರುವುದರಿಂದ ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಬೇಕೆಂದು ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡರಿಗೆ ಭಾನುವಾರದಂದು ಮನವಿ ಸಲ್ಲಿಸಲಾಯಿತು.

ಕುಕ್ಕೇ ಸುಬ್ರಹ್ಮಣ್ಯ ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ ಬಳಿಕ ಮುಖ್ಯಮಂತ್ರಿಗಳ ತುರ್ತು ಕಾರ್ಯಕ್ರಮದ ನಿಮಿತ್ತ ಸುಳ್ಯ ಮೂಲಕ ಮೈಸೂರಿಗೆ ತೆರಳಲು ಕಡಬಕ್ಕೆ ಆಗಮಿಸಿದ ಸಚಿವ ಜಿ.ಟಿ.ದೇವೇಗೌಡರಿಗೆ ಕಡಬದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಭವ್ಯವಾಗಿ ಸ್ವಾಗತಿಸಿದರು. ಕಡಬ ತಾಲೂಕಿನಲ್ಲಿ ಆರು ಜ್ಯೂನಿಯರ್ ಕಾಲೇಜುಗಳಿದ್ದು ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈಗಾಗಲೇ ಕಡಬಕ್ಕೆ ಡಿಗ್ರಿ ಕಾಲೇಜೊಂದನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದು, ಕೂಡಲೇ ಮಂಜೂರುಗೊಳಿಸುವಂತೆ ಸಚಿವರಲ್ಲಿ ವಿನಂತಿಸಿಕೊಳ್ಳಲಾಯಿತು. ಮನವಿಗೆ ಸ್ಪಂದಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರವರು ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ತುರ್ತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Also Read  ರಾಜ್ಯ ರಾಜಧಾನಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ► ರಕ್ಷಣೆಗಾಗಿ ಕಿ.ಮೀ. ಓಡಿದರೂ ನಡುರಸ್ತೆಯಲ್ಲೇ ಅಟ್ಟಾಡಿಸಿ ಕೊಂದರು

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಜಾತ್ಯಾತೀತ ಜನತಾ ದಳದ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಡಿಸಿಸಿ ಸದಸ್ಯ ಡಾ| ರಘು, ಕಡಬ ಜೆಡಿಎಸ್ ತಾಲೂಕು ಉಪಾಧ್ಯಕ್ಷ ಮೋಹನ ಗೌಡ ಪಂಜೋಡಿ, ಪ್ರಧಾನ ಕಾರ್ಯದರ್ಶಿ ನಿವೃತ್ತ ಉಪನ್ಯಾಸಕರಾದ ತಿಲಕ್ ಎ.ಎ., ಕಡಬ ಗ್ರಾ.ಪಂ. ಮಾಜಿ ಅಧ್ಯಕ್ಷ ಹನೀಫ್ ಕೆ.ಎಂ., ಮರ್ದಾಳ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಲೈಮಾನ್ ಪಿ., ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ದೇಶಕ ಚಂದ್ರಶೇಖರ ಕರ್ಕೇರ, ಕಡಬ ನ್ಯಾಶನಲ್ ಫ್ರುಟ್ಸ್ ಮಾಲಕ ಅಬ್ಬಾಸ್ ಸೇರಿದಂತೆ ಕಾಂಗ್ರೆಸ್‌ ಹಾಗೂ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಹಾಜರಿದ್ದರು.

Also Read  ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

error: Content is protected !!
Scroll to Top