ಸೋಮವಾರದಂದು ಕಡಬದಲ್ಲಿ ಕಾಂಗ್ರೆಸ್ ತಾಲೂಕು ಮಟ್ಟದ ಕಾರ್ಯಕರ್ತರ ಸಮಾವೇಶ ► ರಾಜ್ಯದ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ತಾಲೂಕು ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶವು ಜುಲೈ 31 ನೇ ಸೋಮವಾರ ಬೆಳಿಗ್ಗೆ ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಲಿದೆ ಎಂದು ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಆಹಾರ ಮತ್ತು ನಾಗರೀಕ ವ್ಯವಹಾರ ಸಚಿವ ಯು.ಟಿ.ಖಾದರ್, ಪುತ್ತೂರು ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕರ್ನಾಟಕ ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ, ದ.ಕ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ, ದ.ಕ ಜಿಲ್ಲಾ ಕಾಂಗ್ರೇಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಎಸ್.ಸಿ ಘಟಕದ ಅಧ್ಯಕ್ಷ ಶೇಖರ ಕುಕ್ಕೇಡಿ, ಕಿಸಾನ್ ಘಟಕದ ಅಧ್ಯಕ್ಷ ಉಮಾನಾಥ ಶೆಟ್ಟಿ, ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ|ರಘು ಬೆಳ್ಳಿಪ್ಪಾಡಿ, ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿಯ ಉಸ್ತುವಾರಿ ಪೀಯೂಸ್ ರೋಡ್ರಿಗಸ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Also Read  ಕಲ್ಲಡ್ಕ ಡಾ| ಪ್ರಭಾಕರ್ ಹೆಸರಲ್ಲಿ ನಕಲಿ ಖಾತೆ - ದೂರು ದಾಖಲು

ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲವರ್ಧನೆ ಮಾಡುವ ಉದ್ದೇಶದಿಂದ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ರಾಜ್ಯದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಸಾಧನೆಯನ್ನು ಜನತೆಗೆ ಮುಟ್ಟಿಸುವುದು ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಕಾರ್ಯಕರ್ತರ ಮುಖಾಂತರ ಜನತೆಗೆ ತಿಳಿಸಿ ಆ ಮೂಲಕ ಪಕ್ಷದ ಬಲವರ್ಧನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದು ಸಮಾವೇಶದ ಉದ್ದೇಶವಾಗಿದೆ ಎಂದು ದಿವಾಕರ ಗೌಡ ತಿಳಿಸಿದ್ದಾರೆ.

Also Read  ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

 

error: Content is protected !!
Scroll to Top