ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು – News Kadaba

  ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ನಿಮ್ಮನ್ನು ಸತಾಯಿಸುತ್ತಿದ್ದಾರೆಯೇ ►ನಿಮ್ಮ ದೂರು ಸ್ವೀಕರಿಸಲು ನಿಮ್ಮೂರಿಗೆ ಬರಲಿದ್ದಾರೆ ಲೋಕಾಯುಕ್ತರು

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.18.  ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ  ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಜನವರಿ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ವಿಶೇಷ ತಹಶೀಲ್ದಾರರ ಕಚೇರಿ, ಜನವರಿ 24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಜನವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಜನವರಿ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಜನವರಿ 30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ, ಜನವರಿ 31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ, ಮಂಗಳೂರು ತಾಲೂಕು.ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು.

 

ಅನಾಮಧೇಯ ಅರ್ಜಿಗಳು ಬಂದಲ್ಲಿ  ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ  ದೂ.ಸಂಖ್ಯೆ: 0824-2429197, 9886542369 ಪೊಲೀಸ್ ನಿರೀೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237/ 8861688100 ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ  ಪ್ರಕಟಣೆ ತಿಳಿಸಿದೆ.

Scroll to Top