ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com..ಪುತ್ತೂರು,ಜ.18. ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ”  ಕೋಟಿ- ಚೆನ್ನಯ”  ಜೋಡುಕರೆ ಕಂಬಳ ಜ.19ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಕಂಬಳದ ಕುರಿತು ವಿವರ ನೀಡಿ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಗೌರವಾಧ್ಯಕ್ಷ ತೆಯಲ್ಲಿ ಕಳೆದ ಬಾರಿ 25ನೇ ವರ್ಷದ ಕಂಬಳವನ್ನು ವಿಶೇಷ ರೀತಿಯಲ್ಲಿ ನಡೆಸಲಾಗಿತ್ತು. ಈ ಬಾರಿಯ ಕಂಬಳಕ್ಕೆ ಕಂಬಳದ ಕರೆ ಸಹಿತ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಈ ಬಾರಿ 150 ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ವಿಶೇಷವಾಗಿ ಕಂಬಳದಯಶಸ್ಸಿಗಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನ, ಕಾನತ್ತೂರು ದೈವಸ್ಥಾನಗಳಲ್ಲಿ ಪ್ರಾರ್ಥಿಸಿ ಪ್ರಸಾದ ತರಲಾಗಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಅನುಗ್ರಹಕ್ಕಾಗಿ ಪ್ರಾರ್ಥಿಸಲಾಗಿದೆ ಎಂದರು.

ಬೆಳಗ್ಗೆ 10.32ಕ್ಕೆ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅಧ್ಯಕ್ಷ ತೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಂತ ಫಿಲೋಮಿನಾ ಕಾಲೇಜು ಕ್ಯಾಂಪಸ್‌ ನಿರ್ದೇಶಕ ರೆ.ಫಾ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೆರೋ, ಸುದಾನ ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್‌, ನಗರಸಭೆ ಆಯುಕ್ತೆ ರೂಪಾ ಶೆಟ್ಟಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ರಾಜಾರಾಮ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

 

ಸಂಜೆ 6ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಸ್ಥಾಪಕ, ಉದ್ಯಮಿ ಎನ್‌. ಮುತ್ತಪ್ಪ ರೈ ಹಾಗೂ ಅನುರಾಧ ಮುತ್ತಪ್ಪ ರೈ ಪಾಲ್ಗೊಳ್ಳಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅಧ್ಯಕ್ಷ ತೆ ವಹಿಸಲಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ, ಎಂಎಲ್‌ಸಿ ಐವನ್‌ ಡಿಸೋಜ, ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಎಸ್‌.ಎಲ್‌. ಭೋಜೇಗೌಡ, ಬೆಂಗಳೂರು ಬಂಜಾರ ಗ್ರೂಫ್ಸ್‌ನ ಚೇರ್‌ಮೆನ್‌ ಪ್ರಕಾಶ್‌ ಶೆಟ್ಟಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌, ಜಯಕರ್ನಾಟಕ ರಾಜ್ಯಾಧ್ಯಕ್ಷ ಆರ್‌. ಚಂದ್ರಪ್ಪ, ಕಾನತ್ತೂರು ಶ್ರೀ ನಾಲ್ವರ್‌ ದೈವಸ್ಥಾನದ ಮ್ಯಾನೇಜಿಂಗ್‌ ಟ್ರಸ್ಟಿ ಕೆ.ಪಿ. ಮಾಲಿಂಗು ನಾಯರ್‌, ಬೆಂಗಳೂರು ಸೌಂದರ್ಯ ಎಜುಕೇಶನ್‌ ಟ್ರಸ್ಟ್‌ನ ಚೇರ್‌ಮನ್‌ ಮಂಜಪ್ಪ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ, ರಾಜ್ಯ ಇಂಟಕ್‌ ಅಧ್ಯಕ್ಷ ರಾಕೇಶ್‌ ಮಲ್ಲಿ, ಸುಳ್ಯ ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್‌, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ಜೆ.ಆರ್‌. ಲೋಬೋ, ಅಭಯಚಂದ್ರ ಜೈನ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

 

ವಿಶೇಷ ಆಕರ್ಷಣೆಯಾಗಿ ತುಳು, ಕನ್ನಡ ಚಲನಚಿತ್ರ ನಟಿಯರಾದ ಐಂದ್ರಿತಾ ರೇ, ನಿರೀಕ್ಷಾ ಶೆಟ್ಟಿ, ನಟರಾದ ದಿಗಂತ್‌, ಕಳೆದ ಬಿಗ್- ಬಾಸ್ ಸೀಸನ್ ವಿಜೇತ ಚಂದನ್‌ ಶೆಟ್ಟಿ, ಅರವಿಂದ ಬೋಳಾರ್‌ ಪಾಲ್ಗೊಳ್ಳಲಿದ್ದಾರೆ. ಎನ್‌. ಸುಧಾಕರ ಶೆಟ್ಟಿ ಪುತ್ತೂರು (ಧಾರ್ಮಿಕ ಕ್ಷೇತ್ರ), ಆರ್‌.ಕೆ. ಭಟ್‌ ಮೂಡುಬಿದಿರೆ(ಉದ್ಯಮ) ಹಾಗೂ ಕಂಬಳ ಕ್ಷೇತ್ರದಲ್ಲಿ ವಸಂತಿ ಜೆ. ಆರಿಗ ನಿಡ್ಪಳ್ಳಿಗುತ್ತು ಅವರನ್ನು ಸನ್ಮಾನಿಸಲಾಗುವುದು ಎಂದರು.

ಜ.20ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕರುಣಾಕರ ರೈ ಸಾಜ ವಹಿಸಲಿದ್ದು, ಸಹಾಯಕ ಆಯುಕ್ತ ಕೃಷ್ಣಮೂರ್ತಿ ಎಚ್‌.ಕೆ., ಎಪಿಎಂಸಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಬಂಟರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಶೆಟ್ಟಿ ಅರಿಯಡ್ಕ, ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಬಲ್ನಾಡು ಉಳ್ಳಾಲ್ತಿ ದೈವಸ್ಥಾನದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮೋಟಾರು ವಾಹನ ನಿರೀಕ್ಷ ಕ ಎನ್‌. ಶ್ರೀಧರ್‌ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು. ಕಂಬಳ ಸಮಿತಿ ಸಂಚಾಲಕ ಎನ್‌. ಸುಧಾಕರ ಶೆಟ್ಟಿ, ಕಾರ್ಯದರ್ಶಿ ದಿನೇಶ್‌ ಪಿ.ವಿ., ಕೋಶಾಧಿಕಾರಿ ಪ್ರಸನ್ನ ಶೆಟ್ಟಿ ಪಿ.ಎನ್‌., ನಿರಂಜನ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

 

error: Content is protected !!

Join the Group

Join WhatsApp Group