ರಾಮಕುಂಜ: ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ರಾಮಕುಂಜ ಅಮೈ ಕೆರೆ ವೀಕ್ಷಣೆ

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.19.ಕಡಬ ಪ್ರವಾದಲ್ಲಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿಯವರು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮೈ ಯಲ್ಲಿ ನಿರ್ಮಾಣವಾದ ಕೆರೆಯನ್ನು ವೀಕ್ಷಣೆ ಮಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ, ರಾಮಕುಂಜ ಗ್ರಾಮ ಪಂಚಾಯತಿ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಅವರ ಅನುದಾನದಿಂದ ಸುಮಾರು ಐವತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಬಹುಉಪಯೋಗಿ ಕೆರೆಯನ್ನು ವೀಕ್ಷಣೆ ಮಾಡಿದ ಸೆಲ್ವಮಣಿಯವರು ಪಂಚಾಯತಿ ಈ ಸಾಧನೆಯನ್ನು ಶ್ಲಾಘಿಸಿದರು. ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಆರ್.ಕೆ ಹಾಗೂ ಅಭಿವೃದ್ಧಿ ಅಧಿಕಾರಿ ಜೆರಾಲ್ಡ್ ಮಸ್ಕರೇನಸ್ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಮಾಹಿತಿ ನೀಡಿದರು.

Also Read  ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನ

error: Content is protected !!
Scroll to Top