ಲಿಂಗೈಕ್ಯರಾದ ಕಾಯಕ ಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ► ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.21. ನಡೆದಾಡುವ ದೇವರೆಂದೇ ಖ್ಯಾತಿಯ ಕಾಯಕ ಯೋಗಿ, ಶತಾಯುಷಿ ಶ್ರೀ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ (111) ಸೋಮವಾರದಂದು ನಿಧನರಾಗಿದ್ದು, ಶ್ರೀಗಳ ಗೌರವಾರ್ಥ ಮಂಗಳವಾರದಂದು ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಸ್ವಾಮೀಜಿಯವರಿಗೆ ಇತ್ತೀಚೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು‌. ಭಾನುವಾರ ರಾತ್ರಿಯಿಂದ ಅವರ ಆರೋಗ್ಯದಲ್ಲಿ ಭಾರೀ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯಿಂದ ಮಠದಲ್ಲೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಯಿತಾದರೂ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿಯ ಪಾರ್ಥಿವ ಶರೀರದ ಕ್ರೀಯಾ ಸಮಾಧಿಯು ಮಂಗಳವಾರ ಸಂಜೆ 4:30ಕ್ಕೆ ನಡೆಯಲಿದೆ.

Also Read  ಬ್ಯಾಂಕ್ ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ ➤ಆರ್‌ಬಿಐ

ಸ್ವಾಮೀಜಿಯ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಶ್ರೀಗಳ ಗೌರವಾರ್ಥ ಮಂಗಳವಾರದಂದು ರಾಜ್ಯಾದ್ಯಂತ ಸರಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳು ತೆರೆದಿರುವುದಿಲ್ಲ ಎಂದು ಮಾಹಿತಿ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, 3 ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ನಡೆಯಲಿದೆ ಎಂದಿದ್ದಾರೆ.

error: Content is protected !!
Scroll to Top