ಕಡಬ: ಸ್ತ್ರೀ ಶಕ್ತಿ ಮಹಿಳೆಯರಿಗೆ ಪುನರ್ಚೇತನ ತರಬೇತಿ ಕಾರ್ಯಗಾರ ►ಸ್ತ್ರೀ ಶಕ್ತಿಯ ಸದ್ಭಳಕೆಯಿಂದ ಸಧೃಢ ಸಮಾಜ ನಿರ್ಮಾಣ – ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com .ಕಡಬ,ಜ.23. ಕಡಬ: ದ.ಕ. ಜಿಲ್ಲಾ ಪಂಚಾಯಿತಿ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುತ್ತೂರು ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಮೂರು ದಿನ ನಡೆಯುವ ಗೊಂಚಲು ಸದಸ್ಯರ ಬಲವರ್ಧನೆಗಾಗಿ ಸ್ತ್ರೀ ಶಕ್ತಿ ಗೊಂಚಲು ಸದಸ್ಯರಿಗೆ ಪುನರ್ಚೇತನಾ ತರಬೇತಿ ಕಾರ್ಯಗಾರದ ಉದ್ಘಾಟನೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರ ಶಕ್ತಿ ಸದ್ಭಳಕೆ ಮಾಡಿ ಆರ್ಥಿಕ ಸ್ವಾವಲಂಬಿಗಳಾಗಿ ಬದುಕಿದಾಗ ಸಧೃಢ ಸಮಾಜ ನಿರ್ಮಾಣವಾಗುತ್ತದೆ . ಸರಕಾರ ಸ್ತ್ರೀ ಶಕ್ತಿ ಸಂಘಗಳ ಚೇತನಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಆರ್ಥಿಕ ಸ್ವಾವಲಂಬನೆಗೆ ಪ್ರೇರಣೆ ನೀಡುತ್ತಾ ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸುತ್ತಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ಅನೇಕ ರೀತಿಯ ಅನುದಾನಗಳನ್ನು ಒದಗಿಸಿ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡುತ್ತಿದೆ, ಆದರೆ ಸದ್ಬಳಕೆ ಮಾತ್ರ ವಿಲಂಭವಾಗುತ್ತಿದೆ. ಪ್ರತೀ ಹಂತದಲ್ಲಿ ಯೋಜನೆಗಳು ಅನುಷ್ಠಾನವಾಗಬೇಕಾದರೆ ಅದರ ಸಮಗ್ರ ಮಾಹಿತಿ ಪಡೆದುಕೊಂಡು ಸಧುಪಯೋಗ ಪಡೆದುಕೊಳ್ಳಬೇಕು ಎಂದರು.

Also Read  ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..!

ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ ಅಧ್ಯಕ್ಷತೆ ವಹಿಸಿದ್ದರು. ಕಡಬ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಗ್ರಾ.ಪಂ. ಸದಸ್ಯೆ ನೀಲಾವತಿ ಶಿವರಾಮ್ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಡಬ ವಲಯ ಮೇಲ್ವಿಚಾರಕಿ ಹೇಮರಾಮ್‍ದಾಸ್ ಪ್ರಾಸ್ತಾವಿಸಿದರು. ಆಲಂಕಾರು ವಲಯ ಮೇಲ್ವಿಚಾರಕಿ ಭವಾನಿ ಸ್ವಾಗತಿಸಿದರು. ಧನ್ಯಾ ವಂದಿಸಿದರು.

Also Read  ಸುಳ್ಯ: ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ 65 ನೇ ಕನ್ನಡ ರಾಜ್ಯೋತ್ಸವ

error: Content is protected !!
Scroll to Top