ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಇದೀಗ ಕಡಬ ಠಾಣೆಗೆ ದೂರು ನೀಡಿರುವ ಅವರು, ಇತ್ತೀಚೆಗೆ ಕಡಬದ ಕೆಲವೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ಬಗ್ಗೆ ವರದಿ ಮಾಡಿದ್ದು, ಇದೇ ದ್ವೇಷದಲ್ಲಿ ಕೊಲೆಯತ್ನ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

Also Read  ಪೋಳ್ಯ: 74ನೇ ಸ್ವಾತಂತ್ರ್ಯ ದಿನಾಚರಣೆ

ಈ ಪ್ರಕರಣವನ್ನು ಕಡಬ ತಾಲೂಕು ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ಆರೋಪಿಯನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಆಗ್ರಹಿಸಿದೆ.

error: Content is protected !!
Scroll to Top