ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ಮಂಗಳೂರು ಜನವರಿ 23 .ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ (4)ರನ್ವಯ ಒಂದು ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಲನ್ಯಾಯ ಮಂಡಳಿಗಳನ್ನು ಸ್ಥಾಪಿಸಲು ಅವಕಾಶವಿರುತ್ತದೆ. ಅದರಂತೆ ಕಾನೂನಿನನೊಡನೆ ಸಂಘರ್ಷದಲ್ಲಿರುವ ಮಕ್ಕಳ ಹೆಚ್ಚು ಪ್ರಕರಣಗಳು ಬಾಕಿ ಇರುವ ಬೆಂಗಳೂರು ನಗರ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಈ 5 ಜಿಲ್ಲೆಗಳನ್ನು ಒಳಗೊಂಡಂತೆ 5 ಹೆಚ್ಚುವರಿ ಬಾಲನ್ಯಾಯ ಮಂಡಳಿ ಸ್ಥಾಪಿಸಲಾಗಿದ್ದು, ಬಾಲನ್ಯಾಯ ಮಂಡಳಿಗಳಿಗೆ 2019ರಿಂದ 2022 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾಸಿಸಲಾಗಿದೆ.

ಅರ್ಜಿ ನಮೂನೆ, ಸೂಚನೆಗಳು, ವಿಶೇಷ ಸೂಚನೆಗಳು, ದೃಢೀಕರಣಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ ಸೈಟ್  dwcdkar.gov.in  ನಲ್ಲಿ ಲಭ್ಯವಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ನೋಂದಾಯಿತ ಅಂಚೆ ಮೂಲಕ ಅಥವಾ ಮುದ್ದಾಂನಲ್ಲಿ  ಜನವರಿ 29 ರಂದು ಸಂಜೆ 5.30ರ ಒಳಗೆ ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಕೇರಾಫ್, ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು.

Also Read  ಬೆಳ್ತಂಗಡಿ : ನೇಣಿಗೆ ಶರಣಾದ 25ರ ಯುವಕ

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ (ಅರ್ಜಿ ನಮೂನೆಯು 4 ಪುಟ ಒಳಗೊಂಡಿದೆ) ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ದೂರವಾಣಿ ಸಂಖ್ಯೆ: 080-22879381/82/83 ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾಧಿಕಾರಿಗಳ ಕಚೇರಿ ಮೊದಲನೇ ಮಹಡಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು 575001 ದೂರವಾಣಿ ಸಂಖ್ಯೆ: 0824-2440004 /9482756407 ಇವರನ್ನು ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Also Read  Breaking News ➤ ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

error: Content is protected !!
Scroll to Top