(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು ಎಂದರು. ಸಂಸ್ಥೆಯ ಸಂಚಾಲಕ ಮಂಕುಡೆ ವೆಂಕಟ್ರಮಣ ರಾವ್ ಮಾತನಾಡಿ ವಿದ್ಯಾರ್ಥಿಗಳ ಕಲಿಕೆಗೆ ಬೋಧಕ ವೃಂದದವರು ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಹೆತ್ತವರು ಅಗತ್ಯ ನೆರವು ನೀಡುತ್ತಾರೆ. ಆದರೆ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಪರೀಕ್ಷೇ ಗಳನ್ನು ಎದುರಿಸಿ ಉತ್ತಮ ಅಂಕ ಪಡೆದಾಗ ಮಾತ್ರ ಈ ಎಲ್ಲಾ ಶ್ರಮಗಳು ಸಾರ್ಥಕವಾಗಲು ಸಾಧ್ಯ ಎಂದರು.
ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರ, ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಅವರು ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಸರಸ್ವತೀ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಮಹೇಶ್ ನಿಟಿಲಾಪುರ, ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶೈಲಶ್ರೀ ರೈ ಎಸ್., ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ., ಜೇಸಿ ಪದಾಧಿಕಾರಿಗಳಾದ ತಿರುಮಲೇಶ್ ಭಟ್ ಹೊಸ್ಮಠ, ನಿತಿನ್ ಸೂರ್ಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜೇಸಿ ಘಟಕಾಧ್ಯಕ್ಷ ರವಿಚಂದ್ರ ಪಡುಬೆಟ್ಟು ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಕಾಶೀನಾಥ ಗೋಗಟೆ ತರಬೇತುದಾರರನ್ನು ಪರಿಚಯಿಸಿದರು. ಡಾ|ರಾಮಪ್ರಕಾಶ್ ಜೇಸಿವಾಣಿ ವಾಚಿಸಿದರು. ಶಿವಪ್ರಸಾದ್ ರೈ ಮೈಲೇರಿ ವಂದಿಸಿದರು.