ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜ.26.ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು  ಅರಣ್ಯಇಲಾಖೆಯವರು ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿ ಗಳು ಮೆಲ್ಕಾರ್ ಎಂಬಲ್ಲಿ ದಾಳಿ ನಡೆಸಿದಾಗ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

 

ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ. ಕರಿಕಲನ್ ಮಾರ್ಗದರ್ಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡಯವರು ತನಿಖೆ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಬಂಟ್ವಾಳ ವಲಯಾರಣ್ಯಾಧಿಕಾರಿ ಬಿ. ಸುರೇಶ್, ಉಪವಲಯಾರಣ್ಯಾಧಿಕಾರಿ ಪ್ರೀತಂ, ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್, ವಿನಯ್, ಲಕ್ಮೀನಾರಾಯಣ, ರವಿಕುಮಾರ್ ರೇಖಾ, ದಯಾನಂದ, ಹಾಗೂ ಸಿಬ್ಬಂದಿಗಳಾದ ಪ್ರವೀಣ ಕೆಲಿಂಜ ಮತ್ತು ಜಯರಾಮ ಪಾಲ್ಗೊಂಡಿದ್ದರು.ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಐದು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

Also Read  ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

error: Content is protected !!
Scroll to Top