(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭವು ದಿನಾಂಕ 27.1.2019ರ೦ದು ಮಂಗಳೂರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ನ್ಯಾಯಾಲಯದ ತೀರ್ಪು ಬರಹಗಾರರಾದ ಶ್ರೀ ಸುಬ್ರಹ್ಮಣ್ಯ ಬಾಯಿರಿ ಇವರ ಪಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಘದ ಜತೆ ಕಾರ್ಯದರ್ಶಿ ಶ್ರೀ ರಾಜಮುಡಿ ಅವರು ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು. ಶಿರಸ್ತೇದಾರ ಶ್ರೀ ರಾಜೇಶ್ ಎಂ. ಅವರು ಪ್ರಾಸ್ತಾವಿಕ ಭಾಷಣದೊಂದಿಗೆ ಸ್ನೇಹ ಸಮಾವೇಶದ ಹಿನ್ನೆಲೆ ಹಾಗೂ ನ್ಯಾಯಾಂಗ ಇಲಾಖೆಯ ಪ್ರಚಲಿತ ವಿದ್ಯಮಾನಗಳನ್ನು ಸವಿವರವಾಗಿ ಸಭೆಯ ಮುಂದಿಟ್ಟರು.

ಗೌರವಾನ್ವಿತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಕಡ್ಲೂರು ಸತ್ಯನಾರಾಯಣಾಚಾರ್ಯ ಅವರು ದೀಪ ಪ್ರಜ್ವಲಿಸುವ ಮೂಲಕ ಸ್ನೇಹ ಸಮಾವೇಶವನ್ನು ಉದ್ಘಾಟಿಸಿದರು . ಸಮಾರಂಭದ ಮುಖ್ಯ ಅತಿಥಿಗಳಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಎಂಆರ್ ಬಲ್ಲಾಳ್; ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಹಾಗೂ ಸಂಘದ ಗೌರವಾಧ್ಯಕ್ಷರಾಗಿರುವ ಶ್ರೀ ಎಂಆರ್ ದೇವರಾಜು; ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿರುವ ಶ್ರೀ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

ಜಿಲ್ಲಾ ಶಾಖೆಯ ಅಧ್ಯಕ್ಷರಾಗಿದ್ದು ಮೈಸೂರು ಜಿಲ್ಲಾ ಘಟಕಕ್ಕೆ ವರ್ಗಾವಣೆ ಹೊಂದಿರುವ ಶ್ರೀ ನಾಗೇಶ್ ಆರ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನಿವೃತ್ತರಾದ ನ್ಯಾಯಂಗ ಇಲಾಖೆ ನೌಕರರನ್ನು ಸಮ್ಮಾನಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ವರ್ಗಾವಣೆಗೊಂಡ ಶಿರಸ್ತೇದಾರರು ಗಳನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಉನ್ನತ ಅಂಕ ಗಳಿಸಿರುವ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರಗಿತು. ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ನೌಕರರಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಸಾಧನೆಗೈದ ನೌಕರರನ್ನು ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಸಂತೋಷ್ ಕುಮಾರ್ ಟಿ.ಎಚ್. ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಶ್ರೀ ರಾಮದಾಸ್ ಪಾವಂಜೆನಿರೂಪಿಸಿದವರು .ನೌಕರರಿಂದ ಹಾಗೂ ನೌಕರರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಶ್ರೀ ಸುರೇಶ್ ಅಡಿಗ ಇವರ ತಂಡವು ಯಕ್ಷಗಾನ ಪ್ರದರ್ಶನ ನೀಡಿದ್ದು , ಇಲಾಖೆ ನೌಕರರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
