(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಬ್ಬಕ್ಕ ಉತ್ಸವ ಆಯೋಜನೆ ಸಂಬಂಧ ಸಭೆ ನಡೆಸಲಾಯಿತು.ಮಾರ್ಚ್ ಎರಡು ಮತ್ತು ಮೂರರಂದು ಉಳ್ಳಾಲದ ಬೀಚ್ನಲ್ಲಿ ಅರ್ಥಪೂರ್ಣವಾಗಿ ಉತ್ಸವ ಆಯೋಜಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಅರ್ಥಪೂರ್ಣವಾಗಿ ಅಬ್ಬಕ್ಕನ ಉತ್ಸವ ಆಚರಿಸೋಣ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ರಾಣಿ ಅಬ್ಬಕ್ಕನ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯ ಎಂದರು. ಕಾರ್ಯಕ್ರಮವನ್ನು ಅತ್ಯಂತ ಉತ್ತಮವಾಗಿ ಆಯೋಜಿಸಿ ಸ್ಮರಣೀಯವನ್ನಾಗಿಸೋಣ ಎಂದರು.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

