(ನ್ಯೂಸ್ ಕಡಬ) newskadaba.com ಮಂಗಳೂರು,ಜ.30.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ರಾಜ್ಯ ಮಟ್ಟದ ಸ್ಪರ್ಧೆಯ ಮೊದಲು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಫೆಬ್ರವರಿ 5 ರಂದು ಆಯಾ ಜಿಲ್ಲೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಪೂರ್ವಾಹ್ನ 10 ಗಂಟೆಗೆ ಆಯಾ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ, ದೂರದರ್ಶನ ಕೇಂದ್ರ , ಬೆಂಗಳೂರು ಇಲ್ಲಿ ಅಂತಿಮ ಹಂತದಲ್ಲಿ ರಾಜ್ಯ ಮಟ್ಟದ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ-9448867705/ 9449530245/9483549159 ಅಥವಾ ಬೆಂಗಳೂರು ಕರಾವಿಪ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ-080-26718939 ಸಂಪರ್ಕಿಸಬಹುದು ಎಂದು ಗೌರವ ಕಾರ್ಯದರ್ಶಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಗಿರೀಶ್ ಬಿ. ಕಡ್ಲೇವಾಡ ಇವರ ಪ್ರಕಟಣೆ ತಿಳಿಸಿದೆ.
