ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು.31. ನಮ್ಮೊಳಗಿನ ಅಜ್ಞಾನವನ್ನು ದೂರ ಮಾಡಿ ಜ್ಞಾನವನ್ನು ತುಂಬಿಸಿಕೊಳ್ಳಲು ಉತ್ತಮ ಶಿಕ್ಷಣ ಅಗತ್ಯ ಎಂದು ಪುತ್ತೂರು ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಹೇಳಿದರು.

ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧುನಿಕ ಜೀವನಕ್ಕೆ ಒಗ್ಗಿಕೊಂಡು ನಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಜ್ಞಾನದ ಅರಿವು ಬೇಕು. ವಿದ್ಯಾರ್ಥಿ ದಿಸೆಯಲ್ಲಿ ಮಾಡಿದ ಸಾಧನೆ ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ. ಸಂಘಟಿತ ನಾಯಕತ್ವ ಬೆಳವಣಿಗೆಗೆ ವಿದ್ಯಾರ್ಥಿ ಸಂಘಗಳು ಪೂರಕ ಕೆಲಸಮಾಡುತ್ತದೆ. ಸಂಘಟನಾತ್ಮಕ ಜೀವನಪದ್ದತಿಯನ್ನು ವಿದ್ಯಾರ್ಥಿ ಜೀವನದಿಂದಲೇ ಆರಂಭಿಸಬೇಕು ಎಂದರು. ಕಾಲೇಜಿನ ನಿರ್ದೇಶಕ ಪ್ರೊ. ವೇದವ್ಯಾಸ ರಾಮಕುಂಜ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸಂಕೀರ್ತ್ ಹೆಬ್ಬಾರ್ ಪ್ರತಿಜ್ಞಾ ವಿಧಿ ಭೋಧಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘದ ಸಲಹೆಗಾರರಾದ ಲತನ್ ರೈ ಪ್ರಾಸ್ತಾವಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್, ವಿದ್ಯಾರ್ಥಿ ಸಂಘದ ಮಾರ್ಗದರ್ಶಕ ದಿವಾಕರ ಕೆ., ಸಾಂಸ್ಕೃತಿಕ ಕಾರ್ಯದರ್ಶಿ ಮೇಘನಾ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಕೆ, ಜತೆ ಕಾರ್ಯದರ್ಶಿ ಲುಬಾಬ ಜೆ.ಹೆಚ್. ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿಧಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅಕ್ಷಯ್ ಎನ್.ವಿ. ವಂದಿಸಿದರು. ಜ್ಯೋತಿ ಹಾಗೂ ಪ್ರತಿಭಾ ನಿರೂಪಿಸಿದರು.

error: Content is protected !!
Scroll to Top