ನಾಳೆಯಿಂದ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಫೆ.01.ಕಡಬ ಶ್ರೀ ಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ 13ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.2ರಿಂದ 3ರವರೆಗೆ ನಡೆಯಲಿದೆ.ಫೆ.2ರಂದು ಪೂರ್ವಾಹ್ನ ಉಗ್ರಾಣ ಮುಹೂರ್ತ,ಹೊರೆಕಾಣಿಕೆ ಸಮರ್ಪಣೆ ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶ ಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆತಂಬಿಲಸೇವೆ,ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನಬಲಿಉತ್ಸವ,ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ ನಡೆಯಲಿದೆ.ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ನಾರಾಯಣ ಗೌಡ ಅಲುಂಗೂರು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ನಾೈಕ್ ಮೇಲಿನ ಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್

ಕಾರ್ಯಕ್ರಮದ ವಿವರ:
ದಿನಾಂಕ: 02-02-2019ನೇ ಶನಿವಾರ ಪೂರ್ವಾಹ್ನ ಗಂಟೆ 8.42ಕ್ಕೆ ಉಗ್ರಾಣ ಮುಹೂರ್ತ, ಹೊರೆಕಾಣಿಕೆ ಸಮರ್ಪಣೆ
ದಿನಾಂಕ: 03-02-2019ನೇ ರವಿವಾರ ಬೆಳಿಗ್ಗೆ ಗಂಟೆ 9.12ಕ್ಕೆ
ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಪೂಜೆ ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ನಾಗ ದೇವರಿಗೆ ಮತ್ತು ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ 7.25ರಿಂದ ಮಹಾಪೂಜೆ, ಸ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ
ದರ್ಶನ ಬಲಿ ಉತ್ಸವ
ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ

error: Content is protected !!
Scroll to Top