ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಣ್ಣೂರು ವಾರ್ಡ್ ಸಂಖ್ಯೆ 52 ರ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 7,000/ ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ವಾರ್ಡ್‍ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೇಲ್ವಿಚಾರಕರ ಸ್ಥಾನವು ಸಾಮಾನ್ಯ ವರ್ಗ (ಮಹಿಳಾ ಅಭ್ಯರ್ಥಿ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇತರೆ ದೃಢೀಕೃತ ದಾಖಲೆಗಳನ್ನುಫೆಬ್ರವರಿ 22 ರ ಮುಂಚಿತವಾಗಿಮುಖ್ಯ ಗ್ರಂಥಾಲಯಾಧಿಕಾರಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಜಿಲ್ಲಾಧಿಕಾರಿ ಕಚೇರಿ ಆವರಣ ಮಂಗಳೂರು ಇಲ್ಲಿಗೆ ಸಲ್ಲಿಸಲುಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2441905 ಸಂಪರ್ಕಿಸಲು ಮುಖ್ಯಗ್ರಂಥಾಲಯಾಧಿಕಾರಿ(ಪ್ರಭಾರ) ಜಿಲ್ಲಾ ಕೇಂದ್ರ ಗ್ರಂಥಾಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ...

error: Content is protected !!
Scroll to Top