(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.05.ವಿಶ್ವಾದ್ಯಂತ ಸದ್ದು ಮಾಡಿದ ರಾಕಿಂಗ್ ಸ್ಟಾರ್ ಯಶ್ ನಟಿಸಿದ ‘ಕೆಜಿಎಫ್’ ಚಿತ್ರ ಈಗ ಮೊಬೈಲಿ`ನಲ್ಲೇ ವೀಕ್ಷಿಸಬಹುದು. ಅಮೆಜಾನ್ ಪ್ರೈಂ ವಿಡಿಯೋ ಭಾನುವಾರ ತನ್ನ ಟ್ವಿಟ್ಟರ್ ಖಾತೆಯಲ್ಲಿ ಫೆಬ್ರವರಿ 5ರಂದು ಕೆಜಿಎಫ್ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಅಲ್ಲದೇ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿತ್ತು. ಕೆಜಿಎಫ್ ಚಿತ್ರ ಅಮೆಜಾನ್ ಪ್ರೈಂನಲ್ಲಿ ಹಿಂದಿ ಹೊರತುಪಡಿಸಿ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿರುವ ಚಿತ್ರವನ್ನು ವೀಕ್ಷಿಸಬಹುದು.
ಹಣವನ್ನು ಪಾವತಿಸಿ ಪಡೆಯುವ ಸೇವೆಯೇ ಅಮೆಜಾನ್ ಪ್ರೈಂ ಸೇವೆ. ಪ್ರೈಂ ಸದಸ್ಯರಾದರೆ ಡೆಲಿವರಿಗಾಗಿ(ಒಂದು ದಿನ, ಎರಡು ದಿನ) ಹೆಚ್ಚುವರಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಅಷ್ಟೇ ಅಲ್ಲದೇ ಪ್ರೈಂ ವಿಡಿಯೋ, ಮ್ಯೂಸಿಕ್ ಗಳನ್ನು ಸಹ ಉಚಿತವಾಗಿ ನೋಡಬಹುದಾಗಿದೆ. ಹೊಸದಾಗಿ ರಿಲೀಸ್ ಆಗಿರುವ ಸಿನಿಮಾಗಳನ್ನು ಇದರಲ್ಲಿ ನೋಡಬಹುದು. ಈ ಸೇವೆಯನ್ನು ಮೊದಲ ಬಾರಿಗೆ 13 ವರ್ಷಗಳ ಹಿಂದೆ ಅಂದರೆ 2005ರ ಜನವರಿ 2ರಂದು ಆರಂಭಿಸಲಾಗಿತ್ತು. ಏಪ್ರಿಲ್ 2018ರ ವೇಳೆಗೆ ವಿಶ್ವದೆಲ್ಲೆಡೆ 10 ಕೋಟಿ ಪ್ರೈಂ ಸದಸ್ಯರನ್ನು ಅಮೆಜಾನ್ ಸಂಸ್ಥೆ ಹೊಂದಿದೆ. ಭಾರತದಲ್ಲಿ ಈ ಸೇವೆಯನ್ನು 2016 ಜುಲೈ ತಿಂಗಳಿನಲ್ಲಿ ಆರಂಭಿಸಿತ್ತು. ಸದ್ಯ ಈಗ ತಿಂಗಳಿಗೆ 129 ರೂ., ವರ್ಷಕ್ಕೆ 999 ರೂ. ಪಾವತಿಸಿದರೆ ಅಮೇಜಾನ್ ಪ್ರೈಂ ಮೆಂಬರ್ ಆಗಬಹುದು. ಕ್ರೆಡಿಟ್, ಡೆಬಿಟ್ ಕಾರ್ಡ್ ಮೂಲಕ ಮೆಂಬರ್ ಆದರೆ 30 ದಿನಗಳ ಕಾಲ ಉಚಿತ ಟ್ರಯಲ್ ಮೂಲಕ ಸಿನಿಮಾಗಳನ್ನು ವೀಕ್ಷಿಸಬಹುದು.