ಪುತ್ತೂರಿನಲ್ಲಿ ಬೈಕ್ – ಆ್ಯಕ್ಟಿವಾ ನಡುವೆ ಢಿಕ್ಕಿ ► ಕಡಬ ನಿವಾಸಿ ಮೃತ್ಯು

(ನ್ಯೂಸ್ ಕಡಬ) ‌‌‌‌‌ newskadaba.com ಕಡಬ, ಫೆ.05. ಬೈಕ್ ಮತ್ತು ಆಕ್ಟಿವಾ ನಡುವೆ ಢಿಕ್ಕಿ ಸಂಭವಿಸಿ ಗಾಯಗೊಂಡಿದ್ದ ಕಡಬದ ವ್ಯಕ್ತಿಯೋರ್ವರು ಮಂಗಳವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಕಡಬ ಸಮೀಪದ ಕೊಠಾರಿ ನಿವಾಸಿ ಶೇಖರ್ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಭಾನುವಾರ ರಾತ್ರಿ ಪುತ್ತೂರಿನ ತನ್ನ ಮನೆಯಿಂದ ಕೋಳಿ ಮಾಂಸ ತರಲೆಂದು ಬೈಕಿನಲ್ಲಿ ಎಳ್ಮುಡಿ ಸೇತುವೆ ಬಳಿ ತಲುಪಿದಾಗ ವಿರುದ್ಧ ದಿಕ್ಕಿನಿಂದ ಬಂದ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶೇಖರ್ ನಾಯ್ಕ್ ರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Scroll to Top