ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೈಕಲ್ ವಿತರಣೆ

(ನ್ಯೂಸ್ ಕಡಬ) newskadaba.comರಾಮಕುಂಜ,ಫೆ.06.  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು.ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ .ಆರ್.ಕೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಶುಭಹಾರೈಸಿದರು. ಶಾಲಾ ಮುಖ್ಯಗುರು ಸತೀಶ್.ಭಟ್ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಗಣೇಶ್ ಕಟ್ಟಪುಣಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೇಯಾ ಮತ್ತು ಮಯೂರಿ ಪ್ರಾರ್ಥಿಸಿದರು. ಶಿಕ್ಷಕಿ ರಶ್ಮಿ.ಬಿ.ಎಸ್ ವಂದಿಸಿದರು. ಶಿಕ್ಷಕಿ ನಿಶ್ಚಿತಾ.ಎಸ್.ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!
Scroll to Top