(ನ್ಯೂಸ್ ಕಡಬ) newskadaba.comಮಂಗಳೂರು,ಫೆ.08.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ಬಿಳಿನೊಣದ ಬಾಧೆ ಕಂಡುಬಂದಿದ್ದು ಕೆಲವು ಮರಗಳಲ್ಲಿ ಈ ಬಾಧೆ ತೀವ್ರವಾಗಿರುತ್ತದೆ. ಆದುದರಿಂದ ಈ ಕೀಟ ಬಾಧೆಯ ಲಕ್ಷಣ, ಬಾಧೆಯ ಪರಿಣಾಮಗಳು ಹಾಗೂ ಸದರಿ ಕೀಟ ನಿಯಂತ್ರಣ ಕುರಿತು ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಫೆಬ್ರವರಿ 16 ರಂದು ಪೂರ್ವಾಹ್ನ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ.ಆಸಕ್ತ ತೆಂಗು ಬೆಳೆಗಾರರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.