ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಜೀಪು ಚಾಲಕ ➤ ಫೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ – News Kadaba

ಕಡಬ: ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಜೀಪು ಚಾಲಕ ➤ ಫೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಅಪ್ರಾಪ್ತ ಬಾಲಕಿಗೆ ಜೀಪು ಚಾಲಕನೋರ್ವ ಅತ್ಯಾಚಾರಗೈದುದರಿಂದ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿರುವ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ರೆಂಜಿಲಾಡಿ‌ ಗ್ರಾಮದ ಪೇರಡ್ಕ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಕಡಬದಲ್ಲಿ ಜೀಪು ಚಾಲಕನಾಗಿದ್ದ ಸದ್ದಾಂ (25) ಎಂದು ಗುರುತಿಸಲಾಗಿದೆ. ಆರೋಪಿಯು ತಾಲೂಕಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ತಡವಾಗಿ ಪೋಷಕರಿಗೆ ತಿಳಿದಿದೆ. ಈ ಬಗ್ಗೆ ಮಾಹಿತಿ ತಿಳಿದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Scroll to Top