(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.14. ಮದುವೆ ಆಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕ ನಡೆಸಿ ಎಂಟು ತಿಂಗಳ ನಂತರ ಇದೀಗ ಮದುವೆಯಾಗಲು ನಿರಾಕರಿಸಿದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಜಾರಪ್ಪ ಪೂಜಾರಿ ಎಂಬವರ ಪುತ್ರ ಸುಜಿತ್ ಎಂದು ಗುರುತಿಸಲಾಗಿದೆ. ಆರೋಪಿಯು ಬಂಟ್ವಾಳದ ಕಲ್ಲಿನ ಕೋರೆಯೊಂದರಲ್ಲಿ ಹಿಟಾಚಿ ಆಪರೇಟರ್ ಆಗಿ ಕರ್ತವ್ಯದಲ್ಲಿದ್ದು, ಅಲ್ಲೇ ಕೂಲಿ ಕಾರ್ಮಿಕಳಾಗಿದ್ದ ಬಾಗಲಕೋಟೆ ಮೂಲದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಇದೀಗ ಮದುವೆಗೆ ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ಯುವತಿಯು ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಿಸಿದ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.