➤➤ Breaking News ಮರ್ಧಾಳ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.16. ದ್ವಿಚಕ್ರ ವಾಹನಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರನೋರ್ವ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ರಾತ್ರಿ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಐತ್ತೂರು ಗ್ರಾಮದ ಶಿವಾಜಿನಗರ ನಿವಾಸಿ ದಿ| ಅಹಮದ್ ಕುಂಞಿ ಎಂಬವರ ಪುತ್ರ ಇಲ್ಯಾಸ್(43) ಎಂದು ಗುರುತಿಸಲಾಗಿದೆ. ಕೊಣಾಜೆ ಗ್ರಾಮದ ಕೆರ್ನಡ್ಕ ನಿವಾಸಿ ಪೂವಪ್ಪ(38) ಎಂಬವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಇಲ್ಯಾಸ್ ತನ್ನ ದ್ವಿಚಕ್ರ ವಾಹನದಲ್ಲಿ ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ದ. ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್ ➤ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ

error: Content is protected !!
Scroll to Top