ಸುಬ್ರಹ್ಮಣ್ಯ: ಕಿರು ಸೇತುವೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಇನ್ನೋವಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಐವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ಇನ್ನೋವಾ ಕಾರೊಂದು ಹೆದ್ದಾರಿ ಬದಿಯ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.

ಸುಬ್ರಹ್ಮಣ್ಯದಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ಕಮರಿಗೆ ಉರುಳಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದ್ದು, ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸುಮಾರು ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದೆ ಇದ್ದುದರಿಂದ ಅಪಘಾತದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

Scroll to Top