►► Breaking News ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ► ಗ್ಯಾಸ್ ಸೋರಿಕೆಯ ಭೀತಿ…!!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.03. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ನೆಲ್ಯಾಡಿ – ಗುಂಡ್ಯ ನಡುವಿನ ಲಾವತ್ತಡ್ಕ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದಾಗಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಹೆದ್ದಾರಿ ಸಂಚಾರದಲ್ಲಿ ತಡೆ ಉಂಟಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸುತ್ತಿದ್ದಾರೆ.

Also Read  ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

error: Content is protected !!
Scroll to Top