ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.09. ತೀವ್ರ ಜ್ವರಕ್ಕೆ ತುತ್ತಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತ ಯುವಕನನ್ನು ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಹುಕ್ರ ಎಂಬವರ ಪುತ್ರ, ಕಡಬದ ಹೆಚ್.ಪಿ‌. ಪೆಟ್ರೋಲ್ ಬಂಕ್ ಉದ್ಯೋಗಿ ಅಭಿಜಿತ್ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಬಾಧಿಸಿದಾಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಈತ ಮನೆಯಲ್ಲೇ ಉಳಿದುಕೊಂಡಿದ್ದ ಎನ್ನಲಾಗಿದೆ. ತೀವ್ರ ಅನಾರೋಗ್ಯ ಕಾಡಿದಾಗ ಪುತ್ತೂರು ಆಸ್ಪತ್ರೆಗೆ ತೆರಳಿದ್ದು, ಆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಜ್ವರ ಉಲ್ಬಣಗೊಂಡ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟನೆನ್ನಲಾಗಿದೆ.

Scroll to Top