ವಿಟ್ಲ: ಅಪ್ರಾಪ್ತ ಸಹೋದರನಿಂದ ನಿರಂತರ ಅತ್ಯಾಚಾರ ► 13 ವರ್ಷದ ಬಾಲಕಿ ಗರ್ಭಿಣಿ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.10. ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾದ 13 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷ ಪ್ರಾಯದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಆರೋಗ್ಯ ಕೇಂದ್ರವೊಂದರ ವತಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಓರ್ವ ಬಾಲಕಿಯು ವಿಭಿನ್ನವಾಗಿರುವುದನ್ನು ಗಮನಿಸಿದ ಆರೋಗ್ಯ ಕೇಂದ್ರದ ದಾದಿಗಳು ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲು ಸೂಚಿಸಿದ್ದಾರೆ.

Also Read  ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಅದರಂತೆ ಮಂಗಳೂರಿನಲ್ಲಿ ತಪಾಸಣೆ ನಡೆಸುವ ಸಮಯದಲ್ಲಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅಪ್ರಾಪ್ತ ಬಾಲಕಿಯ ವಿಚಾರಣೆ ನಡೆಸಿದಾಗ ಆಕೆಯ ಸಹೋದರನೇ ಕಳೆದೊಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ 17 ವರ್ಷದ ಬಾಲಕನ್ನು ವಶಕ್ಕೆ ಪಡೆದುಕೊಂಡು ಬಾಲ ನ್ಯಾಯ ಮಂಡಳಿಯ ಪಾಲನಾ ಕೇಂದ್ರಕ್ಕೆ ಕಳುಹಿಸಲಾಗಿದೆ.

error: Content is protected !!
Scroll to Top