➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಮೊಬೈಲ್ ಸಂಪರ್ಕ ಇಲ್ಲದೆ ಇದ್ದುದರಿಂದ ಅಪಘಾತಕ್ಕೆ ಒಳಗಾದವರ ಜೀವ ಉಳಿಸಲು ಜನರು ಹರ ಸಾಹಸಪಟ್ಟರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ರಸ್ತೆ ಕಾಮಗಾರಿ ಹಿನ್ನೆಲೆ- ಬದಲಿ ಸಂಚಾರ ವ್ಯವಸ್ಥೆ ➤ ಕಮಿಷನರ್ ಮಹತ್ವದ ಆದೇಶ

error: Content is protected !!
Scroll to Top