ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.15. ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಬಳಿಯ ಬೆದ್ರೋಡಿಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮಗುಚಿ ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವಿಆರ್ ಎಲ್ ಸಂಸ್ಥೆಯ ಬಸ್ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಗಾಯಗೊಂಡ ಮೂವರನ್ನು ಉಪ್ಪಿನಂಗಡಿ ತನಕ ರಿಕ್ಷಾದಲ್ಲಿ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ಸಾಗಿಸಲಾಯಿತು. ಬಸ್ ನಲ್ಲಿದ್ದ 25 ಪ್ರಯಾಣಿಕರನ್ನು ಉಪ್ಪಿನಂಗಡಿಗೆ ಆಗಮಿಸಿದ ಸಂಸ್ಥೆಯ ಇನ್ನೊಂದು ಬಸ್ ನ ಮೂಲಕ ಕಳುಹಿಸಲಾಯಿತು. ಗಾಯಾಳುಗಳ ಪರಿಹಾರ ಕಾರ್ಯಾಚರಣೆ ಯಲ್ಲಿ ರಿಕ್ಷಾ ಚಾಲಕ ಫಾರೂಕ್ ಜಿಂದಗಿ ಹಾಗೂ ಸ್ಥಳೀಯರು ಸಹಕರಿಸಿದರು.

Also Read  ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

error: Content is protected !!
Scroll to Top