ಸುಳ್ಯ: ಬೈಕ್ – ಕಾರು ಮಧ್ಯೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.16. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆ ಎಂಬಲ್ಲಿ ಸಂಭವಿಸಿದೆ.

ಮೃತ ಸವಾರನನ್ನು ಕುಂದಲ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಅದೇ ದಾರಿಯಿಂದಾಗಿ ಸಾಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬೈಕ್ ಸವಾರ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Scroll to Top