➤➤ Breaking News ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬಸ್ಸಿನಡಿಗೆ ಬಿದ್ದ ಯುವಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರದಂದು ಸಂಭವಿಸಿದೆ.

ಮೃತ ಯುವಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಮಣಿ(33) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ಸಿನಡಿಗೆ ಕಡಬ ಸಮೀಪದ ನೀರಾಜೆ ಎಂಬಲ್ಲಿ ಯುವಕ ಬಿದ್ದಿದ್ದು, ಗಂಭೀರ ಗಾಯಗೊಂಡ ಮಣಿಯನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

Also Read  ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ

ಈ ಮಧ್ಯೆ ಯುವಕ ಮಣಿ ಹಠಾತ್ತನೆ ಬಸ್ಸಿನ ಮುಂದೆ ಎರಗಿ ಬಂದಿದ್ದು, ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೆಕೆಂಡುಗಳ ಅಂತರದಲ್ಲಿ ಯುವಕ ಹಾರಿದ್ದಾರೆ ಎಂದು ಬಸ್ಸು ಚಾಲಕ ಕೇಶವ ‘ನ್ಯೂಸ್ ಕಡಬ’ಕ್ಕೆ ತಿಳಿಸಿದ್ದಾರೆ.

error: Content is protected !!
Scroll to Top