ಬಲ್ಯ: ಬೈಕ್ – ಟಾಟಾ ಮ್ಯಾಜಿಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ



(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬೈಕ್ ಹಾಗೂ ಟಾಟಾ ಮ್ಯಾಜಿಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪ ಸೋಮವಾರದಂದು ನಡೆದಿದೆ.







ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟಾಟಾ ಮ್ಯಾಜಿಕ್ ನಡುವೆ ಬಲ್ಯ ಸಮೀಪದ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಕೊಂಬಾರು ನಿವಾಸಿ ಸಾಂತಪ್ಪ ಗೌಡ ಎಂಬವರ ಪುತ್ರ ಹರೀಂದ್ರ(24) ಗಂಭೀರ ಗಾಯಗೊಂಡಿದ್ದು, ಗಾಯಾಳು ಯುವಕನನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top