ಶಾಂತಿಯುತ ಮತದಾನಕ್ಕೆ ಮುನ್ನೆಚ್ಚರಿಕಾ ಕ್ರಮ ➤ ದೀಪಕ್ ರಾವ್ ಹತ್ಯೆ ಆರೋಪಿ ಸೇರಿದಂತೆ 12 ಮಂದಿ ರೌಡಿಗಳ ಗಡೀಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ದೀಪಕ್ ರಾವ್ ಹತ್ಯೆ ಆರೋಪಿ ಸೇರಿದಂತೆ 12 ಮಂದಿ ರೌಡಿಗಳನ್ನು ಮಂಗಳೂರು ನಗರ ಪೊಲೀಸರು ಗಡಿಪಾರು ಮಾಡಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸಂದೀಪ್ ಪಟೀಲ್, ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದ ಆರೋಪಿ ಸೇರಿದಂತೆ 12 ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಈಗಾಗಲೇ ಈ ರೀತಿಯ ಮುನ್ನೆಚ್ಚರಿಕಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ವಿವಿಧ ಪ್ರಕರಣಗಳಲ್ಲಿ ದಾಖಲಾಗಿದ್ದ ಒಂದು ಸಾವಿರಕ್ಕೂ ಹೆಚ್ಚಿನ ಆರೋಪಿಗಳ ಮೇಲೆ ಪ್ರಿವೆಂಟಿವ್ ಕೇಸು ದಾಖಲು ಮಾಡಲಾಗಿದೆ. ಎರಡು ಸಾವಿರಕ್ಕೂ ಹೆಚ್ಚಿನ ರೌಡಿಗಳ ಮೇಲೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ ಎಂದರು.

Also Read  ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ - ಸವಾರರಿಬ್ಬರಿಗೆ ಗಾಯ

error: Content is protected !!
Scroll to Top