(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ಲೋಕಸಭೆ ಚುನಾವಣೆಗೆ ಬಿಜೆಪಿಯು ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ರಾಜ್ಯದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಳಿನ್ ಕುಮಾರ್ ಕಟೀಲ್, ಉಡುಪಿ – ಚಿಕ್ಕಮಗಳೂರು ಕ್ಷೇತ್ರಕ್ಕೆ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ನೀಡಲಾಗಿದೆ. ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ ಸಿಂಹ, ವಿಜಯಪುರಕ್ಕೆ ರಮೇಶ್ ಜಿಗಜಿಣಗಿ, ಉತ್ತರ ಕನ್ನಡದಲ್ಲಿ ಅನಂತಕುಮಾರ್ ಹೆಗಡೆ, ಬೆಂ.ಉತ್ತರ ಕ್ಷೇತ್ರದಲ್ಲಿ ಡಿ.ವಿ.ಸದಾನಂದಗೌಡ, ಚಿಕ್ಕಬಳ್ಳಾಪುರ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಕೇಂದ್ರ ಪಿ.ಸಿ.ಮೋಹನ್, ಚಾಮರಾಜನಗರ ವಿ.ಶ್ರೀನಿವಾಸ್ ಪ್ರಸಾದ್, ತುಮಕೂರು – ಜಿ.ಎಸ್.ಬಸವರಾಜು, ಶಿವಮೊಗ್ಗ-ಬಿ.ವೈ.ರಾಘವೇಂದ್ರ, ದಾವಣಗೆರೆ-ಜಿ.ಎಂ.ಸಿದ್ದೇಶ್ವರ್, ಧಾರವಾಡ-ಪ್ರಹ್ಲಾದ್ ಜೋಶಿ, ಹಾವೇರಿ- ಶಿವಕುಮಾರ್ ಉದಾಸಿ, ಬೀದರ್-ಭಗವಂತ್ ಖೂಬಾ, ಬಾಗಲಕೋಟೆ- ಪಿ.ಸಿ. ಗದ್ದಿಗೌಡರ್, ಬೆಳಗಾವಿ-ಸುರೇಶ್ ಅಂಗಡಿ ಅವರಿಗೆ ಟಿಕೆಟ್ ನೀಡಿದೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಚಿವ ಎ.ಮಂಜು ಹಾಸನದಿಂದ ಹಾಗೂ ಡಾ.ಉಮೇಶ್ ಜಾಧವ್ ಕಲಬುರ್ಗಿ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ದೇವೆಂದ್ರಪ್ಪ ಹಾಗೂ ಚಿತ್ರದುರ್ಗ ಕ್ಷೇತ್ರದಿಂದ ಮಾಜಿ ಸಚಿವ ಎ. ನಾರಾಯಣಸ್ವಾಮಿಗೆ ಟಿಕೆಟ್ ನೀಡಲಾಗಿದೆ.