ಉದನೆ: ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.22. ಬೈಕ್ ಮತ್ತು ಕೆಎಸ್ಸಾರ್ಟಿಸಿ ಬಸ್ ನೆಉವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ‌ ಸಂಭವಿಸಿದೆ.

ಮೃತ ಸವಾರನನ್ನು ಶಿರಾಡಿ ಗಡಿಯಲ್ಲಿ ಅಂಗಡಿ ನಡೆಸುತ್ತಿದ್ದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ! ➤  NIA ಯಿಂದ 1,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

error: Content is protected !!
Scroll to Top