ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಮಿಥುನ್‌ ರೈಗೆ ಭರ್ಜರಿ ಗೆಲುವು ➤ ಕಾಂಗ್ರೆಸ್ – ಜೆಡಿಎಸ್ ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ

(ನ್ಯೂಸ್ ಕಡಬ) newskadaba.com ಕಡಬ, ಎ.04. ಇದೇ ತಿಂಗಳ 18ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಲೋಕಸಭಾ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅತೀ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ತಾ.ಪಂ ಸದಸ್ಯ ಗಣೇಶ್ ಕೈಕುರೆಯವರು ಭವಿಷ್ಯ ನುಡಿದಿದ್ದಾರೆ.

ಅವರು ಎ. 3ರಂದು ಕಡಬದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತನ್ನ ಕುಟುಂಬವೇ ವೈದ್ಯಕೀಯ ಸೇವೆ ನೀಡುವ ಮೂಲಕ ಜನರಿಗೆ ಹತ್ತಿರವಾಗಿರುವ ದ.ಕ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈಯವರು ಸಂಸದರಾಗಿ ಆಯ್ಕೆ ಆಗುವ ಮೂಲಕ ನಮ್ಮ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಾಕ್ಷಿಯಾಗಲಿದ್ದಾರೆ. ಜಿಲ್ಲಾ ಯುವಕ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಿಥುನ್ ರೈಯವರು ರಾಜಕೀಯವಾಗಿ ಪಲಗಿದ್ದು ಹಲವಾರು ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಲ್ಲರಿಗೂ ಹತ್ತಿರವಾಗಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್ – ಜೆಡಿಎಸ್ ನಾಯಕರ ಒಪ್ಪಂದದಂತೆ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್ ಜೆಡಿಎಸ್ ಜೊತೆಯಾಗಿ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಲಿದ್ದು ಜಾತ್ಯತೀತ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಲಿದ್ದಾರೆ.

ಕಡಬ ಬ್ಲಾಕ್ ವ್ಯಾಪ್ತಿಯಲ್ಲಿ ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪದಾಧಿಕಾರಿಗಳು ಒಟ್ಟಾಗಿ ಪತ್ರಿಕಾಗೋಷ್ಠಿ ಕರೆದಿದ್ದು ಪದಾಧಿಕಾರಿಗಳು, ಕಾರ್‍ಯಕರ್ತರು, ಒಟ್ಟಾಗಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಧನೆ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಮತದಾರರಿಗೆ ಮನದಟ್ಟು ಮಾಡುವುದಲ್ಲದೆ ಕಳೆದ 5 ವರ್ಷಗಳಲ್ಲಿ ನರೇಂದ್ರ ಮೋದಿಯವರ ಬಿಜೆಪಿ ಸರಕಾರದ ವೈಫಲ್ಯ ಹಾಗೂ ಕಳೆದ 10 ವರ್ಷಗಳಿಂದ ಈ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ಈ ಭಾಗಕ್ಕೆ ಯಾವುದೇ ಅನುದಾನ ನೀಡದೆ ಬರೇ ಪ್ರಚಾರದಲ್ಲಿ ತೊಡಗಿರುವ ಬಗ್ಗೆ ಮನವರಿಕೆ ಮಾಡಲಿದ್ದೇವೆ. ಮತದಾರರಿಂದಲೇ ಇವರು ದೂರವಾಗಿದ್ದು ನಮ್ಮ ಮೈತ್ರಿ ಅಭ್ಯರ್ಥಿಯ ಗೆಲುವು ಸುಲಭವಾಗಲಿದೆ ಎಂದರು.

ಕಡಬ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ರೋಯ್ ಅಬ್ರಾಹಂ , ಕಡಬ ತಾಲೂಕು ಜೆಡಿಎಸ್ ಪ್ರಭಾರ ಅಧ್ಯಕ್ಷ ಚಂದ್ರಶೇಖರ ಗೌಡ ಕೋಡಿಬೈಲ್, ಕೆ.ಪಿ.ಸಿ.ಸಿ. ಸದಸ್ಯ ಡಾ|ರಘು , ಕಡಬ ತಾ.ಪಂ ಸದಸ್ಯ ಫಝಲ್ ಕೋಡಿಂಬಾಳ, ಕಡಬ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವನಾಥ ಮಾರ್ಕಾಜೆ, ಸೇವಾದಳದ ಅಧ್ಯಕ್ಷ ಅಶ್ರಪ್ ಶೇಡಿಗುಂಡಿ, ಕಡಬ ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್, ಕೆ.ಜೆ. ತೋಮಸ್, ಸುಳ್ಯ ವಿಧಾನ ಸಭಾ ಯುವಕ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಡಿಸಿಸಿ ಕಾರ್ಯದರ್ಶಿ ಸಿ.ಜೆ ಸೈಮನ್, ಡಿಸಿಸಿ ಸದಸ್ಯ ಎ,.ಎಸ್ ಶರೀಫ್, ಕಡಬ ಗ್ರಾ.ಪಂ ಅಧ್ಯಕ್ಷ ಬಾಬು ಮುಗೇರ, ಮಾಜಿ ಅಧ್ಯಕ್ಷ ಹನೀಫ್ ಕೆ.ಎಂ, ಕುಟ್ರುಪ್ಪಾಡಿ ಗ್ರಾ.ಪಂ ಸದಸ್ಯ ಮಹಮ್ಮದ್ ಆಲಿ, ಮಾಜಿ ಸದಸ್ಯ ಕ್ಸೇವಿಯರ್ ಬೇಬಿ, ಕಡಬ ಯುವಕ ಕಾಂಗ್ರೇಸ್ ಅಧ್ಯಕ್ಷ ಫೈಝಲ್ ಎಸ್.ಇ.ಎಸ್, ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಡೆನ್ನಿಸ್ ಫೆರ್ನಾಂಡಿಸ್, ಕಾರ್ಯದರ್ಶಿಗಳಾದ ತೋಮಸ್ ಇಡೆಯಾಳ, ಕೆ.ಎ. ಅಬ್ರಾಹಂ ನೆಲ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group