ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರ ಸಭೆ ➤ ನಾಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ಯಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.06. ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದರು.

ಶನಿವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಪ್ರಿಲ್ 07 ರಂದು ಸಂಜೆ ಆಗಮಿಸಲಿರುವ ಸಿಎಂ ಕುಮಾರಸ್ವಾಮಿ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಸಚಿವ ಯು.ಟಿ.ಖಾದರ್, ಕಾಂಗ್ರೆಸ್ ನೇತಾರರಾದ ರಮಾನಾಥ ರೈ, ಐವನ್ ಡಿಸೋಜಾ, ಜೆಡಿಎಸ್ ಮುಖಂಡರಾದ ಅಮರನಾಥ ಶೆಟ್ಟಿ, ಭೋಜೇ ಗೌಡ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮೊದಲು ಸಂಜೆ 4 ಗಂಟೆಯಿಂದ ಸುಳ್ಯ ಶಾಸ್ತ್ರೀ ವೃತ್ತದ ಬಳಿಯಿಂದ ಮಿಥುನ್ ರೈಯವರು ಪಾದಯಾತ್ರೆಯ ಮೂಲಕ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿಸಿದರು.

Also Read  ಶ್ರೀ ರಾಮಕುಂಜೇಶ್ವರ ಪ.ಪೂ. ಕಾಲೇಜು: ಇತ್ತೀಚೆಗೆ ಪಿಎಸ್ಐ ರ್ಯಾಂಕ್ ಪಡೆದ ಬದ್ರುನ್ನಿಸಾ ಅವರಿಂದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮ

ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಸಂಚಾಲಕರಾದ ಕೇರಳದ ಟಿ.ಜಿ.ಸುನಿಲ್, ಕಾಂಗ್ರೆಸ್ ಮುಖಂಡರಾದ ಎಸ್.ಸಂಶುದ್ದೀನ್, ಕೆ.ಎಂ.ಮುಸ್ತಾಫ, ಕೆ.ಗೋಕುಲ್‌ದಾಸ್, ಸಿದ್ದೀಕ್ ಕೊಕ್ಕೋ, ಕೆ.ಕೆ. ಹರಿಪ್ರಸಾದ್, ನಂದರಾಜ್ ಸಂಕೇಶ, ಲಕ್ಷ್ಮಣ ಶೆಣೈ, ಶಾಫಿ ಕುತ್ತಮೊಟ್ಟೆ, ಶರೀಫ್ ಕಂಠಿ, ನಝೀರ್ ಶಾಂತಿನಗರ, ಜೂಲಿಯಾನ ಕ್ರಾಸ್ತಾ, ಮಿಥುನ್ ಕರ್ಲಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.

error: Content is protected !!
Scroll to Top