ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ.09. ಇಲ್ಲಿನ ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯರೋರ್ವರ ಮೃತದೇಹವೊಂದು ತೇಲುತ್ತಿದ್ದ ಸ್ಥಿತಿಯಲ್ಲಿ ಮಂಗಳವಾರದಂದು ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.







ಇಂದು ಮಧ್ಯಾಹ್ನ ನದಿಯಲ್ಲಿ ಶವವೊಂದು ತೇಲುತ್ತಿರುವುದನ್ನು ಕಂಡು ಸಾರ್ವಜನಿಕರು ತಕ್ಷಣ ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸುಬ್ರಹ್ಮಣ್ಯ ಪೊಲೀಸರು ನೀರಿನಲ್ಲಿ ತೇಲುತ್ತಿದ್ದ ಮೃತದೇಹವನ್ನು ಮೇಲಕ್ಕೆತ್ತಿದ್ದು, ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಮಹಿಳೆಗೆ ಸುಮಾರು 45 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top