ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, .15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ.

ಆದುದರಿಂದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳ ಮಾಲೀಕರು ತಮ್ಮ ಕಾರ್ಮಿಕರಿಗೆ ಏಪ್ರಿಲ್ 18 ರಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದ್ದು ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಧೆಯವರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಅಧಿಕಾರಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..!

error: Content is protected !!
Scroll to Top