ಮಂಗಳೂರು ಏಪ್ರಿಲ್ 23( ನ್ಯೂಸ್ ಕಡಬ) newskadaba.com,):- 2018-19 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆಗಳನ್ನು 1:2ರ ಅನುಪಾತದಲ್ಲಿ ಏಪ್ರಿಲ್ 25 ರಿಂದ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನಕ್ಕೆ ಕರೆ ಪತ್ರಗಳನ್ನು ಕಳುಹಿಸಲಾಗಿದೆ.
ಕರ್ನಾಟಕ ರಾಜ್ಯದ ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತು ನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತಿದೆ ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಯು ಕಾನೂನಿನ ಪ್ರಕಾರ ಅಪರಾಧವಾಗಿರುತ್ತದೆ. ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ/ ಆಮಿಷಗಳಿಗೆ ಮಾರು ಹೋಗಬಾರದೆಂದು ಅಭ್ಯರ್ಥಿಗಳಿಗೆ ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.